Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:17 - ಪರಿಶುದ್ದ ಬೈಬಲ್‌

17 “ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:17
13 ತಿಳಿವುಗಳ ಹೋಲಿಕೆ  

“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು ‘ಅಶುದ್ಧ’ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು