Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:19 - ಪರಿಶುದ್ದ ಬೈಬಲ್‌

19 ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:19
15 ತಿಳಿವುಗಳ ಹೋಲಿಕೆ  

ಅವರು ಪಾಪ ಮಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.


ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.


ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ.


“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.


ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು