ಯೆಹೆಜ್ಕೇಲನು 36:23 - ಪರಿಶುದ್ದ ಬೈಬಲ್23 ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”