ಯೆಹೆಜ್ಕೇಲನು 36:30 - ಪರಿಶುದ್ದ ಬೈಬಲ್30 ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೆಯ ಬೆಳೆಗಳನ್ನು ಕೊಡುವಂತೆ ಮಾಡಿ ನೀವು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಬಾರದಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀವು ಕ್ಷಾಮದೇಶದವರೆಂದು ಜನಾಂಗಗಳು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.