Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:32 - ಪರಿಶುದ್ದ ಬೈಬಲ್‌

32 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:32
11 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನ್ನು ನಿಲ್ಲಿಸುವುದಕ್ಕೆ ಎನುಬೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನ್ನು ನಿನ್ನ ಹೆಸರಿಗೋಸ್ಕರ ಮಾಡದೆ ನನ್ನ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು