Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:34 - ಪರಿಶುದ್ದ ಬೈಬಲ್‌

34 ಜನರು ಹೊಲದಲ್ಲಿ ತಿರುಗಿ ಕೆಲಸ ಮಾಡಲು ಪ್ರಾರಂಭಿಸುವರು. ದಾಟಿಹೋಗುವ ಜನರು ಇನ್ನು ಮೇಲೆ ಪಾಳುಬಿದ್ದ ಕುರುಹುಗಳನ್ನು ಕಾಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೌದು, ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂಮಿಯನ್ನು ಕೃಷಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂವಿುಯನ್ನು ಗೆಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:34
8 ತಿಳಿವುಗಳ ಹೋಲಿಕೆ  

ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ನಾನು ನಿನ್ನೊಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವಿ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿಹೋಗುವ ಪ್ರತಿಯೊಬ್ಬನೂ ನಿನ್ನನ್ನು ಕಂಡು ಹಾಸ್ಯಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು