35 ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.
35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.
ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.
ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.