ಯೆಹೆಜ್ಕೇಲನು 36:37 - ಪರಿಶುದ್ದ ಬೈಬಲ್37 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”