ಯೆಹೆಜ್ಕೇಲನು 36:7 - ಪರಿಶುದ್ದ ಬೈಬಲ್7 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.