Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:8 - ಪರಿಶುದ್ದ ಬೈಬಲ್‌

8 “ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:8
17 ತಿಳಿವುಗಳ ಹೋಲಿಕೆ  

ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ.


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.


ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.


ಕಣಜಗಳು ಗೋದಿಯಿಂದ ತುಂಬಿರುವವು. ಪಿಪಾಯಿಗಳು ಎಣ್ಣೆಯಿಂದಲೂ ದ್ರಾಕ್ಷಾರಸದಿಂದಲೂ ತುಂಬಿತುಳುಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು