Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:10 - ಪರಿಶುದ್ದ ಬೈಬಲ್‌

10 ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು, ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:10
7 ತಿಳಿವುಗಳ ಹೋಲಿಕೆ  

ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.


ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನ್ನು ತಂದು ಹೊರಗಿಟ್ಟೆನು. ಸಾಯಂಕಾಲ ನನ್ನ ಕೈಗಳಿಂದ ಗೋಡೆಯಲ್ಲಿ ರಂಧ್ರ ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನ್ನು ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನ್ನನ್ನು ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ನಾನು ನಿಮಗೆ ಉಸಿರನ್ನು ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು