Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:11 - ಪರಿಶುದ್ದ ಬೈಬಲ್‌

11 ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:11
25 ತಿಳಿವುಗಳ ಹೋಲಿಕೆ  

ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯೀಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಟ್ಟು ಒಂದೇ ದಂಡವಾಗುವಂತೆ ಮಾಡುವೆನು. ಅವು ನನ್ನ ಕೈಯಲ್ಲಿ ಒಂದೇ ದಂಡವಾಗುತ್ತವೆ.’


“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.


ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.


ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.


ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು.


ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ನನಗೆ ನಿರೀಕ್ಷೆಯೇ ಇಲ್ಲ. ನನ್ನ ನಿರೀಕ್ಷೆಯನ್ನು ಯಾರೂ ನೋಡಲಾರರು.


ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು