Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:14 - ಪರಿಶುದ್ದ ಬೈಬಲ್‌

14 ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:14
18 ತಿಳಿವುಗಳ ಹೋಲಿಕೆ  

ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಬರುವದು.’”


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ನಾನು ನಿಮ್ಮಲ್ಲಿ ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’”


ನನ್ನ ಜನರೇ, ನಿಮ್ಮನ್ನು ಸಮಾಧಿಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.


ಯೆಹೋವನ ಸಂದೇಶವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು