Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:2 - ಪರಿಶುದ್ದ ಬೈಬಲ್‌

2 ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಆ ಎಲುಬುಗಳ ಮಧ್ಯೆ ತಗ್ಗನ್ನು ಬಳಸಿಕೊಂಡು ಬರುವಂತೆ ಮಾಡಿದನು; ಇಗೋ, ತಗ್ಗಿನ ಮೇಲೆಲ್ಲಾ ತೀರಾ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:2
5 ತಿಳಿವುಗಳ ಹೋಲಿಕೆ  

ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು