ಯೆಹೆಜ್ಕೇಲನು 37:22 - ಪರಿಶುದ್ದ ಬೈಬಲ್22 ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ ಭಿನ್ನರಾಜ್ಯದವರಾಗಿಯೂ ಇರರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.