Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:23 - ಪರಿಶುದ್ದ ಬೈಬಲ್‌

23 ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:23
31 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.


ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”


ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಎಲ್ಲಾ ವಿಗ್ರಹಗಳು ಇಲ್ಲವಾಗುವವು.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.


ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು