26 ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.
26 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
26 ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
26 ಮತ್ತು ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವದು; ನಾನು ಅವರನ್ನು ನೆಲೆಗೊಳಿಸಿ ವೃದ್ಧಿಮಾಡಿ ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
26 ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.
ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”
“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
“ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.
ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.
ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.
ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.
ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.
ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.