Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:28 - ಪರಿಶುದ್ದ ಬೈಬಲ್‌

28 ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:28
26 ತಿಳಿವುಗಳ ಹೋಲಿಕೆ  

ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.


“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.


ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.


ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.


ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.


ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.


ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.


ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು