Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:3 - ಪರಿಶುದ್ದ ಬೈಬಲ್‌

3 ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:3
14 ತಿಳಿವುಗಳ ಹೋಲಿಕೆ  

ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?


ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


“ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು.


ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು.


ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.


ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು