ಯೆಹೆಜ್ಕೇಲನು 37:4 - ಪರಿಶುದ್ದ ಬೈಬಲ್4 ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಎಲುಬುಗಳ ಮೇಲೆ ಧ್ವನಿಯನ್ನು ಹರಡಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”