ಯೆಹೆಜ್ಕೇಲನು 37:5 - ಪರಿಶುದ್ದ ಬೈಬಲ್5 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ನಾನು ನಿಮಗೆ ಉಸಿರನ್ನು ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಹೊಗಿಸುವೆನು; ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ; ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”