Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:9 - ಪರಿಶುದ್ದ ಬೈಬಲ್‌

9 ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಬರುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:9
12 ತಿಳಿವುಗಳ ಹೋಲಿಕೆ  

ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.


ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ನಾನು ನಿಮಗೆ ಉಸಿರನ್ನು ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.


ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.


ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.


ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.


ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ.


ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸ್ನಾಯುಗಳು, ನರಗಳು ಬಂದವು; ಮತ್ತು ಚರ್ವವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ.


ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು