ಯೆಹೆಜ್ಕೇಲನು 38:11 - ಪರಿಶುದ್ದ ಬೈಬಲ್11 ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ. ಅಧ್ಯಾಯವನ್ನು ನೋಡಿ |
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.