ಯೆಹೆಜ್ಕೇಲನು 38:14 - ಪರಿಶುದ್ದ ಬೈಬಲ್14 ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ಹೇಳು, ನನ್ನ ಒಡೆಯನಾಗಿರುವ ಯೆಹೋವನು ಹೀಗೆನ್ನುತ್ತಾನೆ: ‘ನನ್ನ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನ್ನು ವಶಮಾಡಲು ಬಂದಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರಲು, ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರಾದ ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವದಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ಅಧ್ಯಾಯವನ್ನು ನೋಡಿ |
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.