Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:16 - ಪರಿಶುದ್ದ ಬೈಬಲ್‌

16 ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:16
32 ತಿಳಿವುಗಳ ಹೋಲಿಕೆ  

ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.


ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ.


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.


ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


“ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ.


ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.


ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು