ಯೆಹೆಜ್ಕೇಲನು 38:19 - ಪರಿಶುದ್ದ ಬೈಬಲ್19 ನನ್ನ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವುದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು. ಅಧ್ಯಾಯವನ್ನು ನೋಡಿ |
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.