ಯೆಹೆಜ್ಕೇಲನು 38:2 - ಪರಿಶುದ್ದ ಬೈಬಲ್2 “ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ರೋಷಿನವರನ್ನೂ ಮೆಷೆಕಿನವರನ್ನೂ ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು. ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.