ಯೆಹೆಜ್ಕೇಲನು 38:21 - ಪರಿಶುದ್ದ ಬೈಬಲ್21 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು. ಅಧ್ಯಾಯವನ್ನು ನೋಡಿ |
ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.