ಯೆಹೆಜ್ಕೇಲನು 38:22 - ಪರಿಶುದ್ದ ಬೈಬಲ್22 ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು. ಅಧ್ಯಾಯವನ್ನು ನೋಡಿ |
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.