ಯೆಹೆಜ್ಕೇಲನು 38:4 - ಪರಿಶುದ್ದ ಬೈಬಲ್4 ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು. ಅಧ್ಯಾಯವನ್ನು ನೋಡಿ |
ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.