Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:5 - ಪರಿಶುದ್ದ ಬೈಬಲ್‌

5 ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ಎಲ್ಲ ಖೇಡ್ಯಶಿರಸ್ತ್ರಾಣಧಾರಿಗಳಾದ ಪರ್ಷಿಯರು, ಕೂಸ್ಯರು, ಪೂಟ್ಯರು ಇವರನ್ನು ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾರೂ ತಪ್ಪದೆ ಖೇಡ್ಯಶಿರಸ್ತ್ರಾಣಧಾರಿಗಳಾದ ಪಾರಸಿಯರು ಕೂಷ್ಯರು ಪೂಟ್ಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:5
10 ತಿಳಿವುಗಳ ಹೋಲಿಕೆ  

“‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು.


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


“‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.


ಇಥಿಯೋಫಿಯಾ ಮತ್ತು ಈಜಿಪ್ಟ್ ತೆಬೆಸ್‌ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿದವು.


ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಚ್ರಯಿಮ್, ಪೂಟ್ ಮತ್ತು ಕಾನಾನ್.


ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.


“ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು