ಯೆಹೆಜ್ಕೇಲನು 38:9 - ಪರಿಶುದ್ದ ಬೈಬಲ್9 ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಬಹುಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.