10 ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.
10 ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
10 ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.
10 ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.
10 ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.
ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.
ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.
ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?
ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.
“ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.