ಯೆಹೆಜ್ಕೇಲನು 39:11 - ಪರಿಶುದ್ದ ಬೈಬಲ್11 ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ನಾನು ಇಸ್ರಾಯೇಲಿನೊಳಗೆ ಲವಣ ಸಮುದ್ರದ ಮೂಡಣ ದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ತಗ್ಗನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ಗೋಗನ ಸಮೂಹದ ತಗ್ಗು ಅನ್ನಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು. ಅಧ್ಯಾಯವನ್ನು ನೋಡಿ |