ಯೆಹೆಜ್ಕೇಲನು 39:13 - ಪರಿಶುದ್ದ ಬೈಬಲ್13 ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.