ಯೆಹೆಜ್ಕೇಲನು 39:14 - ಪರಿಶುದ್ದ ಬೈಬಲ್14 “ಹೆಣಗಳನ್ನು ಹೂಳಿಟ್ಟು ದೇಶವನ್ನು ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನ್ನು ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಬೇಕಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತರುವಾಯ ಅವರು ನಾಡನ್ನು ಶುದ್ಧಿಮಾಡುವುದಕ್ಕೆ ತಕ್ಕವರನ್ನು ಆರಿಸಿ, ‘ನೀವು ನಾಡಿನಲ್ಲಿ ತಿರುಗಾಡುತ್ತಾ ನೆಲದ ಮೇಲೆ ಉಳಿದಿರುವ ಎಲುಬುಗಳನ್ನು ಹೂಣಿಡಿ’ ಎಂದು ನಿಯತವಾಗಿ ನೇಮಿಸುವರು; ಏಳು ತಿಂಗಳು ಕಳೆದ ಕೂಡಲೆ, ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ಅವರು ದೇಶವನ್ನು ಶುದ್ಧಿಮಾಡುವದಕ್ಕೆ ತಕ್ಕವರನ್ನು ಆರಿಸಿ - ನೀವು ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ವಿುಕ್ಕಿರುವ ಎಲುಬುಗಳನ್ನು ಹೂಣಿಡಿರೆಂದು ನಿಯತವಾಗಿ ನೇವಿುಸುವರು; ಏಳು ತಿಂಗಳು ಕಳೆದ ಕೂಡಲೆ ಇವರು ಈ ಹುಡುಕುವ ಕೆಲಸವನ್ನು ತೊಡಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. ಅಧ್ಯಾಯವನ್ನು ನೋಡಿ |