Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:17 - ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:17
18 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


ನನ್ನ ‘ಸ್ವಾಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ, ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ.


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.


ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.


ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ಸತ್ತವರ ಆ ನಗರವನ್ನು (ಸಮಾಧಿ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.”


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು