Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:18 - ಪರಿಶುದ್ದ ಬೈಬಲ್‌

18 ನೀವು ರಣವೀರರ ಮಾಂಸವನ್ನು ತಿನ್ನುವಿರಿ, ಪ್ರಪಂಚದ ನಾಯಕರ ರಕ್ತವನ್ನು ಕುಡಿಯುವಿರಿ. ಅವರೆಲ್ಲಾ ಬಾಷಾನಿನ ಕುರಿ, ಹೋತ, ಹೋರಿಗಳಂತೆ ಕೊಬ್ಬಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಟಗರು ಕುರಿ ಹೋತ ಹೋರಿ ಅಂತು ಬಾಷಾನಿನ ಕೊಬ್ಬಿದ ಪಶುಗಳು ಅಂದರೆ ಬಲಿಷ್ಟರು, ಭೂಪತಿಗಳು ಇವರ ಮಾಂಸವೂ ರಕ್ತವೂ ನಿಮಗೆ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಟಗರು, ಕುರಿಮರಿ, ಹೋತ, ಹೋರಿ ಮತ್ತು ಬಾಷಾನಿನ ಕೊಬ್ಬಿದ ಪ್ರಾಣಿಗಳಂತೆ ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ರಾಜಕುಮಾರರ ರಕ್ತವನ್ನು ಕುಡಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:18
16 ತಿಳಿವುಗಳ ಹೋಲಿಕೆ  

ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


“ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು. ಬಾಬಿಲೋನಿನ ಗತಿ ವಧೆಗಾಗಿ ತಂದ ಕುರಿ, ಟಗರು ಮತ್ತು ಹೋತಗಳಂತೆ ಆಗುವುದು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಂದೆಯೇ, ನಾನು ಒಂದೊಂದು ಕುರಿಗಳ ನ್ಯಾಯತೀರಿಸುತ್ತೇನೆ. ಟಗರುಗಳನ್ನೂ ಹೋತಗಳನ್ನೂ ನ್ಯಾಯವಿಚಾರಣೆ ಮಾಡುವೆನು.


“ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರಿರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.”


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.


ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬ ತಿನ್ನಿರಿ; ಅಮಲೇರುವ ತನಕ ರಕ್ತವನ್ನು ಕುಡಿಯಿರಿ.


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು