Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:21 - ಪರಿಶುದ್ದ ಬೈಬಲ್‌

21 ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡಿಸಿದವನು ನಾನೇ ಎಂಬದು ಆ ಜನಾಂಗಗಳಿಗೆಲ್ಲಾ ಗೋಚರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:21
18 ತಿಳಿವುಗಳ ಹೋಲಿಕೆ  

ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.


ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


ನನ್ನ ಜನರು ಸ್ತ್ರೀಯರ ಕೈಯಿಂದ ಅಂದವಾದ ಮನೆಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತುಕೊಂಡಿದ್ದೀರಿ.


ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.


ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು