Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:23 - ಪರಿಶುದ್ದ ಬೈಬಲ್‌

23 ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಇಸ್ರಾಯೇಲ್ಯರು ತಮ್ಮ ಅಧರ್ಮದ ನಿವಿುತ್ತವೇ ಸೆರೆಯಾಗಿ ಹೋದರೆಂತಲೂ ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:23
27 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


“‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.


ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.


ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು