ಯೆಹೆಜ್ಕೇಲನು 39:24 - ಪರಿಶುದ್ದ ಬೈಬಲ್24 ಅವರು ಪಾಪ ಮಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರ ಅಶುದ್ಧತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರ ಹೊಲಸುತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.