ಯೆಹೆಜ್ಕೇಲನು 39:26 - ಪರಿಶುದ್ದ ಬೈಬಲ್26 ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.