ಯೆಹೆಜ್ಕೇಲನು 39:27 - ಪರಿಶುದ್ದ ಬೈಬಲ್27 ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.