Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:4 - ಪರಿಶುದ್ದ ಬೈಬಲ್‌

4 ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:4
14 ತಿಳಿವುಗಳ ಹೋಲಿಕೆ  

“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು.


ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು.


ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.


ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು