Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:6 - ಪರಿಶುದ್ದ ಬೈಬಲ್‌

6 ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:6
21 ತಿಳಿವುಗಳ ಹೋಲಿಕೆ  

ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.


ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.


ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು ಅದರ ಸಹಾಯಕರನ್ನು ದಹಿಸುವದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.


ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.


“ಶೆಬ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿಬಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು.


‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.


ಅಲ್ಲಿ ಗೋಮೆರ್ಯ ರಾಜ್ಯವು ತನ್ನ ಎಲ್ಲಾ ಸಿಪಾಯಿಗಳೊಂದಿಗೆ ಇರುವುದು. ಬಹು ದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವದು. ಈ ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.


ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.


“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”


ನಾನು ನಿಮ್ಮಲ್ಲಿ ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’”


“ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.


ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು