ಯೆಹೆಜ್ಕೇಲನು 4:13 - ಪರಿಶುದ್ದ ಬೈಬಲ್13 ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಬಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.” ಅಧ್ಯಾಯವನ್ನು ನೋಡಿ |