ಯೆಹೆಜ್ಕೇಲನು 4:16 - ಪರಿಶುದ್ದ ಬೈಬಲ್16 ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು. ಅಧ್ಯಾಯವನ್ನು ನೋಡಿ |