ಯೆಹೆಜ್ಕೇಲನು 4:3 - ಪರಿಶುದ್ದ ಬೈಬಲ್3 ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ. ಅಧ್ಯಾಯವನ್ನು ನೋಡಿ |
ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.