Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:12 - ಪರಿಶುದ್ದ ಬೈಬಲ್‌

12 ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಐವತ್ತು ಸೆಂಟಿಮೀಟರ್ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಆರಾರು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:12
6 ತಿಳಿವುಗಳ ಹೋಲಿಕೆ  

ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.


ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು.


ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರುಬದುರಾಗಿದ್ದವು.


ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.


ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು