Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:14 - ಪರಿಶುದ್ದ ಬೈಬಲ್‌

14 ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಾಕಾರದಲ್ಲಿನ ನಿಲವು ಕಂಬದವರೆಗೆ ನಿಲವುಕಂಬಗಳನ್ನು ಅಳತೆಮಾಡಲು ಮೂವತ್ತು ಮೀಟರ್ ಇದ್ದವು. ಹೆಬ್ಬಾಗಿಲನ್ನು ಸುತ್ತುಮುತ್ತಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಾಕಾರದಲ್ಲಿನ ನಿಲವುಕಂಬದವರೆಗೆ ನಿಲವುಕಂಬಗಳನ್ನು [ಅಳತೆ] ಮಾಡಲು ಅರುವತ್ತು ಮೊಳವಿದ್ದವು; ಹೆಬ್ಬಾಗಿಲನ್ನು ಸುತ್ತುಮುತ್ತಲು [ಅಳೆದನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:14
11 ತಿಳಿವುಗಳ ಹೋಲಿಕೆ  

“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.


ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.


ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು.


ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”


ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.


ಯೆಹೋವನು ನನಗೆ, ‘ದಾವೀದನೇ, ನಿನ್ನ ಮಗನಾದ ಸೊಲೊಮೋನನು ದೇವಾಲಯವನ್ನು ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಕಟ್ಟುವನು. ಯಾಕೆಂದರೆ ಸೊಲೊಮೋನನನ್ನು ನಾನು ಆರಿಸಿಕೊಂಡಿದ್ದೇನೆ. ಅವನು ನನಗೆ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು.


“ಆರೋನನ ಮತ್ತು ಅವನ ಪುತ್ರರು ಧಾನ್ಯನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಆ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.


ಅಂಗಳದ ಸುತ್ತಲಿನ ಪರದೆಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಂಗಳದ ಬಾಗಿಲಿನ ಪರದೆ,


ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರುಬದುರಾಗಿದ್ದವು.


ಹೊರಗಿನ ಬಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.


ಪವಿತ್ರಸ್ಥಳದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕವಾಗಿದ್ದವು. ಮಹಾ ಪವಿತ್ರಸ್ಥಳದೆದುರು ಮರದಿಂದ ತಯಾರಿಸಿದ ವೇದಿಕೆಯಂತೆ ಕಾಣುತ್ತಿದ್ದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು